
ಶಿರಸಿ: ತಾಲೂಕಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಾದ ಸಂಭ್ರಮಾ ಹೆಗಡೆ (ಚೆಸ್ ಮತ್ತು ಯೋಗ) ಸುನಿಧಿ ಹೆಗಡೆ (ಯೋಗ) ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.