ಜೊಯಿಡಾ: ಸಮಾಜವನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ವಿದ್ಯೆಯನ್ನು ಕೊಡುವುದು ಬಹಳ ಜವಾಬ್ದಾರಿಯ ಕೆಲಸ. ಜೊಯಿಡಾದಂತಹ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರಿಗೆ ನನ್ನ ಅಭಿನಂದನೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ತಾಲೂಕಿನ ಕುಣಬಿ ಭವನದಲ್ಲಿ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಗುರು ಗೌರವಾರ್ಪಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಸರ್ಕಾರಿ ಶಾಲೆಗಳೇ ಹೆಚ್ಚಿದೆ. ಇಲ್ಲಿ ಶಿಕ್ಷಕರು ಕಷ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ ಹಾಗೂ ಕಾಡುಗುಡ್ಡಗಳ ನಡುವೆ ಇರುವ ಶಾಲೆಗೆ ದಿನವು ಶಾಲೆಗೆ ಹೋಗಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ಶಿಕ್ಷಕರು ನಿಜವಾಗಿಯೂ ಅಭಿನಂದನಾರ್ಹರು ಎಂದರು.
ಜೊಯಿಡಾ ಗ್ರಾಮ ಪಂಚಾಯತ ಅಧ್ಯಕ್ಷ ಅರುಣ ಕಾಂಬ್ರೆಕರ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ ಹಾಗೂ ಆರ್.ವಿ.ದೇಶಪಾಂಡೆ ಅವರಿಂದ ತಾಲೂಕಿನ ಎಲ್ಲಾ ಶಿಕ್ಷಕರಿಗೆ ಬ್ಯಾಗ್ ಮತ್ತು ಶಿಕ್ಷಣ ಇಲಾಖೆಯಿಂದ ಸಾಧನೆ ಮಾಡಿದ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ದಬ್ಗಾರ, ಜಿ.ಪಂ. ಮಾಜಿ ಸದಸ್ಯ ರಮೇಶ ನಾಯ್ಕ, ಸಂಜಯ ಹಣಬರ, ಶಕುಂತಲಾ ಹಿರೇಗೌಡರ, ಶ್ಯಾಮ ಪೊಕಳೆ, ಸಂತೋಷ ಮಂಥೇರೋ, ಶಿಕ್ಷಣ ಇಲಾಕೆಯ ಸಂತೋಷ ಸಾಳುಂಕೆ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ತಾಲೂಕಾ ಅಧ್ಯಕ್ಷ ಪಾಂಡುರಂಗ ಪಟಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಷೀರ್ ಶೇಖ್, ಮುಂತಾದವರಿದ್ದರು.