ಶಿರಸಿ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ,ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಉಪನಿರ್ದೇಶಕರ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಇವರ ಸಂಯುಕ್ತಾಶ್ರಯದಲ್ಲಿ ಟಾಟಾ ಕನ್ಸಲ್ಟನ್ಸಿ ಸರ್ವೀಸ್ ನಡೆಸುವ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಸ್ಪರ್ಧೆ 2022 ಸೆ. 7.ರಂದು ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಜರುಗಿತು.
ಇದರಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಅಯನಾ ವೈ. ಮತ್ತು 9ನೇ ತರಗತಿಯ ವಿದ್ಯಾರ್ಥಿ ಧೀರಜ ಎಂ. ನಾಯ್ಕ್ ಭಾಗವಹಿಸಿ ಮುಂದಿನ ಹಂತವಾದ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಗಣಕಯಂತ್ರ ಸಹಶಿಕ್ಷಕಿ ಶ್ರೀಮತಿ ಚೇತನಾ ಹೆಗಡೆ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಇದಕ್ಕೆ ಕಾರಣರಾದ ಪಾಲಕರಿಗೆ,ತರಬೇತಿ ನೀಡಿದ ಶಿಕ್ಷಕಕರಿಗೆೆ ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಮುಖ್ಯೋಪಾಧ್ಯಾಪಕ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ಬಾಂದವರು, ಶಿರಸಿ ಲಯನ್ಸ್ ಕ್ಲಬ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.