• Slide
    Slide
    Slide
    previous arrow
    next arrow
  • ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ: ಅಚ್ಚುಕಟ್ಟು ವ್ಯವಸ್ಥೆಗೆ ಡಿಸಿ ಸೂಚನೆ

    300x250 AD

    ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮ ಆಯೋಜನೆಗೆ ಬಂದರು ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿಸಭೆಯಲ್ಲಿ ಅವರು ಮಾತನಾಡಿದರು.
    ಕಡಲತೀರ ಸ್ವಚ್ಛತಾ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖಾ ಅಧಿಕಾರಿಗಳು, ಸಿಬ್ಬಂದಿ, ಶಾಲಾ- ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಕಿರುಚಿತ್ರ ಪ್ರದರ್ಶನ ಹಾಗೂ ಇತರ ಕಾರ್ಯಕ್ರಮಗಳ ಆಯೋಜನೆಗೆ ಮೀನುಗಾರಿಕೆ ಇಲಾಖೆಯು ನೆಹರು ಯುವ ಕೇಂದ್ರದ ಸಹಾಯದೊಂದಿಗೆ ಸಿದ್ಧತೆ ನಡೆಸಬೇಕು. ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ವೇದಿಕೆ ಕಾರ್ಯಕ್ರಮಕ್ಕಾಗಿ ಉಪವಿಭಾಗಾಧಿಕಾರಿಗಳು ಸಮಿತಿ ರಚಿಸುವಂತೆ ಸೂಚಿಸಿದರು.
    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗ ಎಂ. ಮಾತನಾಡಿ, ಕಡಲ ಸ್ವಚ್ಛತೆಯ ವೇಳೆ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ತೂಕದ ಆಧಾರದಲ್ಲಿ ಬೆಲೆ ನಿಗದಿಪಡಿಸಿ ಕೊಂಡುಕೊಳ್ಳಲಾಗುವುದು. ಹೆಚ್ಚು ಕಸ ಸಂಗ್ರಹಣೆ ಮಾಡಿದವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.
    ಹಸಿ ಕಸ ಹಾಗೂ ಒಣ ಕಸ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ಬದಿಯಲ್ಲಿ ಛಾಯಾಚಿತ್ರ ಹಾಗೂ ಬ್ಯಾನರ್‌ಗಳ ಪ್ರದರ್ಶನದ ಜೊತೆಗೆ ಇನ್ನಷ್ಟು ಚಟುವಟಿಕೆಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
    ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿವೈಎಸ್‌ಪಿ ಅರವಿಂದ ಕಲ್ಗುಜ್ಜಿ, ತಹಶೀಲ್ದಾರ ಎನ್.ಎಫ್..ನರೋನಾ, ನಗರಸಭೆಯ ಪೌರಾಯುಕ್ತ ಆರ್.ಪಿ.ನಾಯ್ಕ ಸೇರಿದಂತೆ ಕೋಸ್ಟ್ಗಾರ್ಡ್, ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top