• Slide
    Slide
    Slide
    previous arrow
    next arrow
  • ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ 2021ರ ಜನವರಿಯಿಂದ ಡಿಸೆಂಬರ್ 2022ರ ಅವಧಿಯಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ಲೇಖಕರು ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ 4 ಪ್ರತಿಗಳನ್ನು 2023ರ ಜನವರಿ 4ರ ಸಂಜೆ 5.30ರೊಳಗಾಗಿ ಪ್ರೊ.ಯು.ಆರ್.ರಾವ್, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಭವನ, ಮೇಜರ್ ಉನ್ನೀಕೃಷ್ಣನ್ ರಸ್ತೆ, ದೊಡ್ಡ ಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರ, ವಿದ್ಯಾರಣ್ಯಪುರ ಅಂಚೆ ಬೆಂಗಳೂರು (560097) ವಿಳಾಸಕ್ಕೆ ಕಳುಹಿಸುವುದು. ಆಯ್ಕೆಯಾದ ಲೇಖಕರಿಗೆ ರೂ.25ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು.

    300x250 AD

    ಹೆಚ್ಚಿನ ಮಾಹಿತಿ ಅರ್ಜಿ ನಮೂನೆಗಾಗಿ ಅಕಾಡೆಮಿಯ ವೆಬ್‌ಸೈಟ್ http://www.kstacademy.in ಅಥವಾ ದೂರವಾಣಿ ಸಂಖ್ಯೆ 08029721550 /49 ಗೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top