ಶಿರಸಿ: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಶ್ಚಿತ ಗುರಿಯಿಟ್ಟುಕೊಂಡು, ಯೋಜಿತವಾಗಿ ಅಧ್ಯಯನ ಮಾಡಿದ್ದಲ್ಲಿ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳಲು ಸಾಧ್ಯ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಹೇಳಿದರು ಅವರು ನಗರದ
ಸರ್ಕಾರಿ ಉರ್ದು ಮತ್ತು ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ಆರ್ಥಿಕವಾಗಿ ಹಿಂದುಳಿದ 45 ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ವತಿಯಿಂದ ಉಚಿತ ಸಮವಸ್ತ್ರ ವಿತರಿಸಿ ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ಒತ್ತಾಯ ಪೂರ್ವಕವಾಗಿ ಮಾಡಬಾರದು. ಅದರಿಂದ ಪರಿಪೂರ್ಣತೆಯನ್ನು ಸಾಧಿಸಲು ಸಾಧ್ಯವಿಲ್ಲವೆಂದರು.
ಯಾವುದಾದರೊಂದು ವಿಷಯವನ್ನು ಗುರಿಯಾಗಿಟ್ಟುಕೊಂಡು ಅದನ್ನು ಆಸಕ್ತಿಯಿಂದ ನಿಭಾಯಿಸಿದಾಗ ಮಾತ್ರ್ರ ಆ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಶಿಕ್ಷಕರು ಅತ್ಯಂತ ಸೂಕ್ಷ್ಮ ಮತ್ತು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ, ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಕೂಡ ಶ್ರಮವಹಿಸಿ ಕಲಿಯಬೇಕು ಹಾಗೂ ಶಿಕ್ಷಕರನ್ನು ಪೂಜ್ಯನೀಯ ಭಾವದಿಂದ ಕಾಣಬೇಕು ಎಂದರು. ವಿದ್ಯಾರ್ಥಿಗಳ ಕಣ್ಣಿಗೆ ಕಾಣುವ ದೇವರು ಎಂದರೆ ಅದು ಶಿಕ್ಷಕರು. ಲೋಕಜ್ಞಾನ ಮತ್ತು ವಿದ್ಯಾದಾನವನ್ನು ಶಿಕ್ಷಕರಿಂದ ಮಾತ್ರ ಪಡೆಯಲು ಸಾಧ್ಯ. ವಿದ್ಯಾರ್ಥಿಗಳು ಯಾವುದೇ ಒಂದು ಕೆಲಸವನ್ನು ಕಷ್ಟಪಟ್ಟು ಮಾಡುವ ಬದಲು ಇಷ್ಟಪಟ್ಟು ಮಾಡಿದಾಗ ಮಾತ್ರ ಸಾಧನೆಯ ಶಿಖರಕ್ಕೇರಲು ಸಾಧ್ಯವೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯೋಪಾಧ್ಯಾಯ ಆನಂದ್ ಎಸ್ ಕೋರಾವರ ಅವರು ಮಾತನಾಡಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮುನ್ನಡೆದರೆ ಮತ್ತು ವಿದ್ಯಾರ್ಜನೆಗೆ ಮುಂದಾದರೆ ಶೇ.100 ರಷ್ಟು ಫಲಿತಾಂಶ ಗಳಿಸಬಹುದಾಗಿದೆ ಎಂದು ಹೇಳಿದರು.
ಎಸ್. ಡಿ. ಎಮ್. ಸಿ. ವತಿಯಿಂದ ಉಪೇಂದ್ರ ಪೈ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ದೈಹಿಕ ಶಿಕ್ಷಕ ಕಿರಣ್ ನಾಯ್ಕ ಸ್ವಾಗತಿಸಿದರು, ಶಿಕ್ಷಕ ಅಬ್ದುಲ್ ರೆಹಮಾನ್ ನಿರೂಪಿಸಿದರು ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಆದಂಮ ಸಾಬ್ ಹೇರೂರ್, ಸಿಕಂದರ್ ಸಲೀಂ ಸುಂಟಿ, ಶಿಕ್ಷಕ ತಜ್ಞ ಎ. ಎ. ಮುಘಲ್, ಶಿಕ್ಷಕಿ ಸಾಜಿದಾ, ಅನ್ಸಾರ ಹೆಗಡೆಕಟ್ಟಾ, ರಫೀಕ್ ಕಲಬುರ್ಗಿ, ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.