ಮುಂಡಗೋಡ: ಪ್ರಧಾನಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ರೈತರಿಗೆ ಪ್ರತಿ 4 ತಿಂಗಳಿಗೊಮ್ಮೆ ರೈತರ ಖಾತೆಗೆ 2000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಪಿಎಮ್ ಕಿಸಾನ್ ಪೊರ್ಟಲ್‌ನಲ್ಲಿ ಇ- ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ಇ- ಕೆವೈಸಿ ಮಾಡದ ರೈತರ ಖಾತೆಗೆ ಹಣ ವರ್ಗಾವಣೆಯಾಗುವುದಿಲ್ಲ. ಆದ್ದರಿಂದ ಪಿಎಮ್ ಕಿಸಾನ್ ಪೊರ್ಟಲ್‌ನಲ್ಲಿ ಇ- ಕೆವೈಸಿ ಮಾಡದೆ ಇರುವ ರೈತರು ಸೆ.14ರ ಒಳಗಾಗಿ ಇ- ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಗ್ರಾಮ ಒನ್ ಮತ್ತು ಕಾಮನ್ ಸರ್ವಿಸ್ ಸೆಂಟರ್ (ಸಿಎಸ್‌ಸಿ) ಜನಸೇವಾ ಕೇಂದ್ರಗಳಲ್ಲಿ ಇ- ಕೆವೈಸಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡಲು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ- ಕೆವೈಸಿ ಮಾಡಿಸಿಕೊಳ್ಳಲು ಸೆ.14ರ ತನಕ ಗಡುವು
