Slide
Slide
Slide
previous arrow
next arrow

ಪೋಕ್ಸೋ ಆರೋಪಿಯಿಂದ ಮತ್ತೆ ಬಾಲಕಿಯ ಮೇಲೆ ದೌರ್ಜನ್ಯ!

300x250 AD

ಶಿರಸಿ: ಈ ಹಿಂದೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯೋರ್ವ ಯಡಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿ ಆಕೆಯ ಮೈಮೇಲೆ ಕೈ ಹಾಕಿ ಹಲ್ಲೆ ನಡೆಸಿದ ಆರೋಪಿಯನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಅಕ್ಷಯ ಮಡಿವಾಳ ಹೆರವಳ್ಳಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಮತ್ತೋರ್ವ ನಾಪತ್ತೆಯಾಗಿದ್ದಾನೆ. ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ತಡೆದು ಆಕೆಗೆ ದೈಹಿಕ ಹಿಂಸೆಯನ್ನು ನೀಡಿ, ಆಕೆಯನ್ನು ಅಪಹರಣ ಮಾಡಲು ಉದ್ದೇಶಿಸಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.
ಆರೋಪಿಯ ಮೇಲೆ ಪೋಕ್ಸೋ, ಅಪಹರಣಕ್ಕೆ ಪ್ರಯತ್ನ ಹಾಗೂ ದೈಹಿಕ ಹಿಂಸೆ ಸೇರಿದಂತೆ ಹಲವು ಕಲಂ ಅಡಿಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಹೊರಬಂದ ಆರೋಪಿ ಅಕ್ಷಯ ಇದೀಗ ಮತ್ತೆ ಆ ಬಾಲಕಿಯ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಅಪಹರಣ ಮಾಡುವ ಉದ್ದೇಶದಿಂದ ಪ್ರಯತ್ನಪಟ್ಟ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದ್ದು, ಪಿಎಸ್‌ಐ ಈರಯ್ಯ ತನಿಖೆ ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top