
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಹಾಗೂ ಹಸರಗೋಡ ಗ್ರಾ.ಪಂ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ವಿಧಾನ ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆ, ತೋಟ, ಗದ್ದೆ ಪ್ರದೇಶಗಳಿಗೆ ಭೇಟಿ ನೀಡಿ ಸಂಕಷ್ಟದಲ್ಲಿರುವವರಿಗೆ ಸಾಂತ್ವನ ಹೇಳಿದರು. ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಅಗತ್ಯ ಸಾಮಗ್ರಿಗಳನ್ನು ಸಂತ್ರಸ್ತರಿಗೆ ವಿತರಿಸಿದರು. ಹಾಗೂ ಪರಿಹಾರ ಒದಗಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.