ನವದೆಹಲಿ: ವಾರಣಾಸಿ ಜಿಲ್ಲಾ ನ್ಯಾಯಾಲಯವು ಸೋಮವಾರ ಜ್ಞಾನವಾಪಿ ಮಸೀದಿ ಪ್ರಕರಣವನ್ನು ನಿರ್ವಹಿಸಬಹುದಾದ ಪ್ರಕರಣವಾಗಿದೆ ಎಂದಿದ್ದು, ಮಸೀದಿಯಲ್ಲಿ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.
ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಶೃಂಗಾರ ಗೌರಿ ದೇಗುಲವಿದೆ, ಅಲ್ಲಿ ಪೂಜೆ ಮಾಡಲು ಅನುಮತಿ ನೀಡಬೇಕೆಂದು ಕೋರಿ ಐವರು ಹಿಂದೂ ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ಕೋರ್ಟ್ ಅಂಗೀಕರಿಸಿದೆ.
ನ್ಯಾಯಾಲಯ ಹಿಂದೂಗಳ ಅರ್ಜಿಗೆ ಪ್ರತಿಯಾಗಿ ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೇ ಹಿಂದೂ ಕಡೆಯವರು ಸಲ್ಲಿಸಿರುವ ಮೊಕದ್ದಮೆಯನ್ನು ನಿರ್ವಹಿಸಬಹುದಾಗಿದೆ ಎಂದು ಹೇಳಿದೆ.
ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 22 ರಂದು ನಡೆಯಲಿದೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಜ್ಞಾನವಾಸಿ ಮಸೀದಿಯ ಗೋಡೆಗೆ ತಾಗಿದಂತೆ ಹಿಂದೂ ದೇಗುಲದ ರಚನೆ ಗೋಚರಿಸುತ್ತದೆ. ಅದು ಶೃಂಗಾರ ಗೌರಿ ದೇಗುಲವಾಗಿದೆ. ಅಲ್ಲಿ ನಮಗೆ ಪೂಜೆ ಮಾಡಲು ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.
ಕೃಪೆ: http://news13.in