
ಹೊನ್ನಾವರ: ಶಾಸಕ ಶಿವರಾಮ್ ಹೆಬ್ಬಾರ್ ಗೆ ಸಚಿವ ಸ್ಥಾನ ನೀಡಬೇಕು. ನಾನು ಎಂದೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಭಟ್ಕಳ ಶಾಸಕ ಸುನೀಲ್ ನಾಯ್ಕ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷ ಅಧಿಕಾರಕ್ಕೆ ಬರುವಲ್ಲಿ ಶಿವರಾಮ್ ಹೆಬ್ಬಾರ್ ರವರ ಪ್ರಯತ್ನ ಸಾಕಷ್ಟಿದೆ. ಈ ಹಿಂದೆ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಸಕ ಶಿವರಾಮ್ ಹೆಬ್ಬಾರ್ ಕಾರ್ಯನಿರ್ವಹಿಸಿದ್ದಾರೆ. ಆದ್ದರಿಂದ ಮುಂದಿನ ಅವಧಿಗೂ ಕೂಡ ಅವರನ್ನೇ ಉಸ್ತುವಾರಿ ಸಚಿವರನ್ನಾಗಿಸಬೇಕು ಎಂದು ಆಗ್ರಹಿಸುವುದಾಗಿ ಅವರ ಹೇಳಿದರು.