ಸಿದ್ದಾಪುರ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಎಐಸಿಸಿ ಸೂಚನೆಯಂತೆ ಕೆಪಿಸಿಸಿ ಮಾರ್ಗದರ್ಶನದಲ್ಲಿ ಸೆ.14ರಂದು ಬೆಳಿಗ್ಗೆ 10 ಗಂಟೆಗೆ ಸಿದ್ದಾಪುರ ಬ್ಲಾಕ್ ವ್ಯಾಪ್ತಿಯಲ್ಲಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ಉಪಾಧ್ಯಕ್ಷರಾದ ಐವನ್ ಡಿಸೋಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ನಾಯಕ, ನಿವೇದಿತ ಆಳ್ವಾ, ಕಲಗೋಡ್ ರತ್ನಾಕರ್ ಮತ್ತು ಕೆಪಿಸಿಸಿ ಉಸ್ತುವಾರಿಗಳಾದ ಮುರಳಿ ಶೆಟ್ಟಿ, ಪ್ರಕಾಶ್ ಪಾಟೀಲ, ನವೀನಚಂದ್ರ ಶೆಟ್ಟಿ, ಡಿಆರಓ ಮತ್ತು ಬಿಆರ್‌ಒ ಉಪಸ್ಥಿತರಿರಲಿದ್ದಾರೆ.
ಈ ಸಭೆಗೆ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕೆಪಿಸಿಸಿ ಸದಸ್ಯರು ಮತ್ತು ಪದಾಧಿಕಾರಿಗಳು, ಡಿಸಿಸಿ ಸದಸ್ಯರು ಮತ್ತು ಪದಾಧಿಕಾರಿಗಳು ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳು, ಸೆಲ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಘಟಕ ಮತ್ತು ವಾರ್ಡ್ ಸಮಿತಿಯ ಅಧ್ಯಕ್ಷರುಗಳು ,ಎಲ್ಲ ಸ್ತರದ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿರಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಸಂತ ಎಲ್.ನಾಯ್ಕ ಮನ್ಮನೆ ಪ್ರಕಟಣೆಯಲ್ಲಿ ಕೋರಿದ್ದಾರೆ.