ಸಿದ್ದಾಪುರ: ಕೋರ್ಟ್ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನದ ಪೋಷಣ ರಥಕ್ಕೆ ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ. ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಈ ಅಭಿಯಾನದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಕಮಲಾಕ್ಷ ಡಿ, ಸರಕಾರಿ ಅಭಿಯೋಜಕ ಚಂದ್ರಶೇಖರ್ ಎಚ್ ಎಸ, ನ್ಯಾಯ ವಾದಿಗಳ ಸಂಘದ ಅಧ್ಯಕ್ಷ ಜೆ. ಜಿ. ಹೆಗಡೆ, ಸಿಡಿಪಿಓ ಶ್ರೀ ಮತಿ ಪೂರ್ಣಿಮಾ ಆರ್, ಹಿರಿಯ ನ್ಯಾಯ ವಾದಿ ಎನ್ ಡಿ ನಾಯ್ಕ, ವಕೀಲರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.