ಕಾರವಾರ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಸಂಬಂಧ ಸ್ಥಳ ಪರಿಶೀಲನೆ ಮತ್ತು ವಿವಿಧ ಹಿತಾಸಕ್ತಿದಾರರೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರದ ಸಮಿತಿಯು ಸೆ.26ರಿಂದ 28ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೆ.28ರಂದು ವಿವಿಧ ಹಿತಾಸಕ್ತಿದಾರರೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಸ್ವತಃ ಭಾಗವಹಿಸಲು ಆಸಕ್ತಿ ಹೊಂದಿರುವ ಸಂಘಟಣೆಗಳು, ವ್ಯಕ್ತಿಗಳು ಯೋಜನೆಯ ಕುರಿತಾಗಿ ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ಸೆ. 21ರೊಳಗಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಲಿಖಿತ ಅಭಿಪ್ರಾಯವನ್ನು ಇ-ಮೇಲ್: dckarwar@gmail.com ಗೆ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ: ಸ್ಥಳ ಪರಿಶೀಲನೆ
