• Slide
  Slide
  Slide
  previous arrow
  next arrow
 • ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

  300x250 AD

  ಕಾರವಾರ: 2022-23ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ಅಡಿಯಲ್ಲಿ ಬರುವ ಇತರೆ ನಿಗಮಗಳಾದ ಅಲೆಮಾರಿ, ಮಡಿವಾಳ, ವಿಶ್ವಕರ್ಮ, ಉಪ್ಪಾರ, ಮರಾಠಾ ಹಾಗೂ ಆರ್ಯ ವೈಶ್ಯ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಹೊಸತು ಹಾಗೂ ನವೀಕರಣ ಯೋಜನೆಗಳ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
  ಸೌಲಭ್ಯ ಪಡೆಯ ಬಯಸುವವರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ್ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 20 ರೊಳಗೆ ಅರ್ಜಿ ಸಲ್ಲಿಸಬೇಕು ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸ ಬಯಸುವವರು 18 ರಿಂದ 60 ವರ್ಷದೊಳಗಿನವರಾಗಿರಬೇಕು. ಅವರ ಕುಟುಂಬದ ವಾರ್ಷಿಕ ವರಮಾನ ರೂ. 98,000/-ಕ್ಕಿಂತ ಕಡಿಮೆ ಇರಬೇಕು. ಜಮೀನು 1 ಎಕರೆಯಿಂದ 5 ಎಕರೆ ಒಳಗಿರಬೇಕು. ಕಂದಾಯ ಇಲಾಖೆಯಿಂದ ಸಣ್ಣ ಹಿಡುವಳಿಯ ಪ್ರಮಾಣ ಪತ್ರ ಹೊಂದಿರಬೇಕು. ಜಮೀನಿಗೆ ಯಾವುದೇ ನೀರಾವರಿ ಸೌಲಭ್ಯ ಹೊಂದಿರಬಾರದು ಮತ್ತು ಅರಿವು ಶೈಕ್ಷಣಿಕ ಸಾಲ ಪಡೆಯ ಬಯಸುವ ವಿದ್ಯಾರ್ಥಿಗಳು ಸಿ.ಇ.ಟಿ. ಮೂಲಕ ಆಯ್ಕೆಯಾದ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು. ಸಿ.ಇ.ಟಿ. ಪ್ರವೇಶ ಪತ್ರ, ವ್ಯಾಸಂಗದ ಪ್ರಮಾಣ ಪತ್ರ, ಜಾತಿ ಆದಾಯ, ಇತ್ಯಾದಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯ ಝೆರಾಕ್ಸ ಪ್ರತಿ ಹಾಗೂ ಎಲ್ಲಾ ಅಗತ್ಯ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಹೈ ಚರ್ಚ ಹತ್ತಿರ, ಕಾರವಾರ-580301 ಈ ವಿಳಾಸಕ್ಕೆ ಕಳುಹಿಸಬೇಕು.
  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://www.dbcdc.karnataka.gov.in ಗೆ ಅಥವಾ ದೂರವಾಣಿ ಸಂಖ್ಯೆ 08382223229 ನ್ನು ಸಂಪರ್ಕಿಸಿ ಎಂದು ಕಾರವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top