• Slide
  Slide
  Slide
  previous arrow
  next arrow
 • ಮಾರಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ: ಸಾಂಸ್ಕೃತಿಕ ಕಾರ್ಯಕ್ರಮ,ಕ್ರೀಡಾಕೂಟ

  300x250 AD

  ಶಿರಸಿ:ಮಾರಿಕಾಂಬಾ ದೇವಸ್ಥಾನದಲ್ಲಿ ಸೆ. 26ರಿಂದ ಅ. 5ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಿದ್ದಾರೆ.

  ಮಾರಿಕಾಂಬಾ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸೆ.26ರಿಂದ ಅ.8ರವರೆಗೆ ದೇವಸ್ಥಾನದಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ವಿವಿಧ ರೀತಿಯ ನಡೆಯಲಿವೆ. ಸೆ.22 ಹಾಗೂ 23ರಂದು ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಶಾಲಾ ಖೋ-ಖೋ, ಕಬಡ್ಡಿ, ಮಕ್ಕಳಿಗೆ ಖೋ-ಖೋ, ಕಬಡ್ಡಿ, ವಾಲಿಬಾಲ್, ಪುರುಷರಿಗೆ ಹಗ್ಗಜಗ್ಗಾಟ, ಮಹಿಳೆಯರಿಗೆ ಹಗ್ಗ ಜಗ್ಗಾಟ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಪುರುಷರಿಗೆ 100 ಮೀಟರ್ ಓಟ, ಮಹಿಳೆಯರಿಗೆ 50ಮೀಟರ್ ಓಟ, ಉದ್ದ ಜಿಗಿತ, ಗುಂಡು ಎಸೆತ, ಕ್ರಿಕೆಟ್ ಬಾಲ್ ಎಸೆತ ಸೇರಿ ಹಲವು ರೀತಿಯ ಸ್ಪರ್ಧೆಗಳು ನಡೆಯಲಿವೆ. ಒಬ್ಬ ಅಭ್ಯರ್ಥಿಗೆ ಮೂರು ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ. ಪ್ರತಿ ಸ್ಪರ್ಧೆಗೆ 10 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಯಾವುದೇ ಸ್ಪರ್ಧೆಯಲ್ಲಿ 5 ಜನಕ್ಕಿಂತ ಹೆಚ್ಚಿಗೆ ಅಭ್ಯರ್ಥಿಗಳು ಇರದೇ ಇದ್ದಲ್ಲಿ ಸ್ಪರ್ಧೆಯನ್ನು ರದ್ದುಗೊಳಿಸಲಾಗುವುದು. ಎಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಸೆ. 20ರ ಒಳಗೆ ಹೆಸರನ್ನು ನೋಂದಾಯಿಸಿಬೇಕು. ಅ. 8 ಶನಿವಾರ 4 ಗಂಟೆಗೆ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ದೇವಸ್ಥಾನದ ಸಭಾಮಂಟಪದಲ್ಲಿ ವಿತರಿಸಲಾಗುವುದು ಎಂದು ಹೇಳಿದರು. ಅ. 5 ಬುಧವಾರ ವಿಜಯದಶಮಿಯಂದು ಪಡಲಿಗೆ ಉತ್ಸವ, ಸೀಮೋಲ್ಲಂಘನ, ಪಲ್ಲಕ್ಕಿ ಉತ್ಸವ, ಹನುಮಂತ ದೇವರ ಪಲ್ಲಕ್ಕಿ ಉತ್ಸವ, ರಾತ್ರಿ 10ಘಂಟೆಯ ನಂತರ ಕೋಟೆಕೆರೆ ಗದ್ದುಗೆಯ ಮೇಲೆ ಮಾರಿಕಾಂಬಾ ದೇವಿಯ ಪಲ್ಲಕ್ಕಿ ಉತ್ಸವ, ಕಲಶ ವಿಸರ್ಜನೆ, ಪಡಿಯಾಟ ನಡೆಯುವುದು.

  300x250 AD

  ಉಪಾಧ್ಯಕ್ಷ ಸುಧೇಶ ಜೋಗಳೆಕ‌ರ ಧರ್ಮದರ್ಶಿಗಳಾದ ವತ್ಸಲಾ ಹೆಗಡೆ, ಶಿವಾನಂದ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top