• first
  second
  third
  previous arrow
  next arrow
 • ಮೋಹನ ಖಾರ್ವಿ ನಿಧನಕ್ಕೆ ತೀವ್ರ ಸಂತಾಪ

  300x250 AD

  ಅಂಕೋಲಾ: ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕಿರಿಯ ಲೆಕ್ಕ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮೋಹನ ಖಾರ್ವಿ ಅನಾರೋಗ್ಯದಿಂದ ಮರಣ ಹೊಂದಿದ್ದಾರೆ.

  ಮೋಹನ್ ಖಾರ್ವಿ ಕ್ರಿಯಾಶೀಲ ಕೆಲಸಗಾರನಾಗಿದ್ದು, ತಾಲೂಕಿನ ಶಿಕ್ಷಕರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು. ತಾಲೂಕಿನ ಶಿಕ್ಷಕ ವರ್ಗ ಅವರ ಚಿಕಿತ್ಸೆಗಾಗಿ ಸ್ವಲ್ಪ ಮಟ್ಟಿನ ಆರ್ಥಿಕ ನೆರವನ್ನು ಸಹ ನೀಡಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

  300x250 AD

  ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಲಲಕ್ಷ್ಮೀ ಪಾಟೀಲ, ಕ್ಷೇತ್ರ ಸಮನ್ವಯಾಧಿಕಾರಿ ಹರ್ಷಿತಾ ನಾಯಕ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ವಿ. ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ, ಸಂಘದ ಪ್ರಧಾನ ಕಾರ್ಯದರ್ಶಿ ರಾಜು ಎಚ್. ನಾಯಕ ಬೇಲೇಕೇರಿ, ಶಿಕ್ಷಣ ಸಂಯೋಜಕ ಬಿ.ಎಲ್. ನಾಯ್ಕ, ರಾಜೇಶ ಮಾಸ್ತರ ಸೂರ್ವೆ, ನಿವೃತ್ತ ಶಿಕ್ಷಕ ಎಮ್.ಎಸ್. ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿಗಳು ಸೇರಿದಂತೆ ಹಲವರು ಅವರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಾಲೂಕಿನ ಶಿಕ್ಷಕ ವರ್ಗ ಖಾರ್ವಿಯವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದೆ.

  Share This
  300x250 AD
  300x250 AD
  300x250 AD
  Back to top