• Slide
    Slide
    Slide
    previous arrow
    next arrow
  • ಸೆ.17ಕ್ಕೆ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಕಲೋತ್ಸವ

    300x250 AD

    ಯಲ್ಲಾಪುರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ತಿಳಿಸಿದ್ದಾರೆ.

    ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುನಂದಾ ದಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ರಾಜ್ಯ ವಿಕೇಂದ್ರೀಕರಣ ಮತ್ತು ಯೋಜನಾ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ, ತಾಲ್ಲೂಕ ಪಂಚಾಯಿತಿ ಆಡಳಿತಾಧಿಕಾರಿ ನಟರಾಜ್ ಟಿ.ಎಚ್. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

    ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಜೇಯ ನಾಯಕ, ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ತಾಲೂಕಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಆರ್ ಭಟ್, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಅತಿಥಿಗಳಾಗಿ ಪಾಲ್ಗೊಳ್ಳುವರು.

    300x250 AD

    ಸಾಮಾಜಿಕ ಕಾರ್ಯಕರ್ತ ಬಾಲಕೃಷ್ಣ ನಾಯಕ, ಧಾತ್ರಿ ಫೌಂಡೇಶನ್ ಪ್ರಮುಖ ಶ್ರೀನಿವಾಸ ಭಟ್, ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ ವಿಶೇಷ ಆಹ್ವಾನಿತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ

    Share This
    300x250 AD
    300x250 AD
    300x250 AD
    Leaderboard Ad
    Back to top