ಶಿರಸಿ: ನಗರದ ಪ್ರತಿಷ್ಠಿತ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸೆ.17ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಟಿ.ಎಸ್.ಎಸ್.ಆಸ್ಪತ್ರೆಯ ರಕ್ತನಿಧಿ ವಿಭಾಗದಲ್ಲಿ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದ್ದು 18 ವರ್ಷದ ಆರೋಗ್ಯವಂತ ಆಸಕ್ತ ದಾನಿಗಳು ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.