• Slide
  Slide
  Slide
  previous arrow
  next arrow
 • ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ: ರಾಜ್ಯಪಾಲ ಗೆಹ್ಲೋಟ್ ಭಾಗಿ

  300x250 AD

  ಕಾರವಾರ: ಸೆ.17ರ ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆಗೆ ಕಡಲ ನಗರಿ ಸಜ್ಜಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಇದಕ್ಕಾಗಿ ಭರದಿಂದ ತಯಾರಿಗಳು ನಡೆದಿದೆ.
  ಈಗಾಗಲೇ ನಗರದ ಕಡಲತೀರದ ಮಯೂರವರ್ಮ ವೇದಿಕೆಯ ಬಳಿ ಟೆಂಟ್‌ಗಳನ್ನ ಹಾಕಲಾಗುತ್ತಿದ್ದು, ವೇದಿಕೆ ಸಿದ್ಧತೆ ಕಾರ್ಯ ನಡೆಯುತ್ತಿದೆ. ಟ್ಯಾಗೋರ್ ತೀರದಲ್ಲಿ ರಾಜ್ಯಪಾಲರು ಬೆಳಿಗ್ಗೆ ಸ್ವಚ್ಛತಾ ಕಾರ್ಯ ನಡೆಸಲಿದ್ದು, ಬಳಿಕ ಮಯೂರವರ್ಮ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ದಿನವಾದ ಶನಿವಾರ ಮಳೆಯ ಮುನ್ಸೂಚನೆ ಕೂಡ ಇರುವುದರಿಂದ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
  ಸೆ.16ರಂದೇ ರಾಜ್ಯಪಾಲರು ಕಾರವಾರಕ್ಕೆ ಬರಲಿದ್ದು, ಸೀಬರ್ಡ್ ನೌಕಾನೆಲೆಯಲ್ಲಿ ತಂಗಲಿದ್ದಾರೆ. 17ರಂದು ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಮಧ್ಯಾಹ್ನ ಗೋವಾ ರಾಜ್ಯಪಾಲರೊಂದಿಗೆ ಗೋವಾ ಮತ್ತು ಕರ್ನಾಟಕದ ಗಡಿ ಜಿಲ್ಲೆಗಳಾದ ಉತ್ತರಕನ್ನಡ ಹಾಗೂ ಬೆಳಗಾವಿಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಗೋವಾದಲ್ಲಿ ಮಹತ್ವದ ಸಭೆಯನ್ನೂ ನಡೆಸಲಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕೂಡ ಮಾಹಿತಿ ನೀಡಿದ್ದು, ಕಡಲತೀರ ಸ್ವಚ್ಛತಾ ಕಾರ್ಯದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top