ಕುಮಟಾ: ಪಟ್ಟಣದ ಚಿತ್ರಗಿ ಪ್ರೌಢಶಾಲೆಯಲ್ಲಿ ಕೈ ತೊಳೆಯುವ ಕ್ರಮ ಹಾಗೂ ಹದಿ ಹರೆಯದವರ ಸಮಸ್ಯೆಗಳ ಕುರಿತಾದ ಜಾಗೃತಿ ಕಾರ್ಯಗಾರ ನಡೆಯಿತು.
ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಕಸ್ತೂರಬಾ ಇಕೋ ಕ್ಲಬ್ ನ ಸಹಯೋಗದಲ್ಲಿ ಕೈ ತೊಳೆಯುವ ಆದರ್ಶ ಕ್ರಮ ಹಾಗೂ ಹದಿ ಹರೆಯದವರ ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಟಾ ಸರಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ ಪ್ರದೀಪ್ ನಾಯಕ ಮನೋಜ್ಞವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಹದಿ ಹರೆಯದವರ ಸಮಸ್ಯೆಗಳು ಅದರ ಪರಿಹಾರಗಳ ಕುರಿತು ಉಪನ್ಯಾಸ ನೀಡಿದರು. ಸ್ಥಳೀಯ ಆಶಾ ಕಾರ್ಯಕರ್ತೆ ಅಂಕಿತಾ ನಾಯ್ಕ ಕೈತೊಳೆಯುವ ಪ್ರಾತ್ಯಕ್ಷಿಕೆಯನ್ನು ತೋರಿಸಿಕೊಟ್ಟರು. ಸಭಾಧ್ಯಕ್ಷತೆಯನ್ನು ಶಾಲಾ ಮುಖ್ಯಾಧ್ಯಾಪಕ ಪಾಂಡುರಂಗ ವಾಗ್ರೇಕರ ವಹಿಸಿದ್ದರು.
ಆರೋಗ್ಯ ಇಲಾಖೆಯ ಶೋಭಾ ಸಿಸ್ಟರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸ್ವಚ್ಛತೆಯ ದೃಷ್ಟಾಂತಗಳನ್ನು ನೀಡಿದರು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು. ಇಕೋ ಕ್ಲಬ್ ಸಂಚಾಲಕ ಕಿರಣ ಪ್ರಭು ನಿರೂಪಿಸಿದರೆ, ವಿ. ಎನ್. ಭಟ್ ಸ್ವಾಗತಿಸಿದರು. ಸುರೇಶ ಪೈ ವಂದಿಸಿದರು.