ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಹಿಂದಿ ದಿವಸ್ ಹಾಗೂ ಅಭಿಯಂತರ ದಿನ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಆರಂಭಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯ ವಸಂತ ಭಟ್ ಮಾತನಾಡಿ, ಹಿಂದಿ ಭಾಷೆಯ ಮಹತ್ವ ಹಾಗೂ ಅದರ ವಿಶೇಷತೆಯ ಬಗ್ಗೆ ವಿವರಿಸಿದರು. ಶಾಲೆಯ ಹಿಂದಿ ಶಿಕ್ಷಕಿಯಾದ ಶ್ರೀಮತಿ ದೀಪಾ ಮಡಗಾಂವಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಾಲೆಯ ವಿದ್ಯಾರ್ಥಿನಿ ಕುಮಾರಿ ರುಚಿತಾ ಹೆಗಡೆ ಸ್ವಾಗತಿಸಿದರೆ, ಕುಮಾರಿ ಶ್ರೀಲಕ್ಷ್ಮೀ ಹೆಗಡೆ, ಕುಮಾರಿ ವಿನುತಾ ಭಟ್ ನಿರೂಪಿಸಿ, ಕುಮಾರಿ ಪೂಜಾ ಎಸ್. ಎನ್. ವಂದಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿಯಾದ ಶ್ರೀಮತಿ ಸೀತಾ ಜೋಶಿ ಹಾಗೂ ಕಲಾ ಶಿಕ್ಷಕರಾದ ಜಿ.ಎಮ್.ಹೆಗಡೆ ತಾರಗೋಡ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯಎಲ್ಲಾ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿ ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.