ಯಲ್ಲಾಪುರ: ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಲಾರಿ ಪಲ್ಟಿಯಾದ ಘಟನೆ ತಾಲೂಕಿನ ಕೊಡ್ಲಗದ್ದೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ನಡೆದಿದೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ರಸ್ತೆ ಪಕ್ಕದ ಗಟಾರದಲ್ಲಿ ಪಲ್ಟಿಯಾಗಿದೆ. ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಲಾರಿಯಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಲಾರಿ-ಕಾರ್ ಅಪಘಾತ; ಪ್ರಯಾಣಿಕರು ಅಪಾಯದಿಂದ ಪಾರು
