ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ನೆಹರೂ ಯುವ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ-2022ನ್ನು ಅರ್ಥಪೂರ್ಣವಾಗಿ ಆಚರಿಸುವ ನಿಮಿತ್ತ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಿ ಪ್ರಥಮ ಸ್ಥಾನ ಪಡೆದ ಅಭ್ಯರ್ಥಿಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕಳುಹಿಸುವ ಉದ್ದೇಶದಿಂದ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ನೋಂದಣಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಉತ್ತರ ಕನ್ನಡ ಜಿಲ್ಲೆಯ 15 ರಿಂದ 29 ವರ್ಷ ವಯೋಮಿತಿಯ ಯುವ ಜನರು http://nammakarwar.com/nykyu22/ ಜಿಲ್ಲಾ ಹಂತದಲ್ಲಿ ಕೊಟ್ಟ ಲಿಂಕನ್ನು ಉಪಯೋಗಿಸಿ ಆ.5ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಭಾಗವಹಿಸಲು ಸೂಕ್ತ ದಾಖಲೆಗಳಾದ ಆಧಾರ, ನಿವಾಸಿ ಪ್ರಮಾಣ ಪತ್ರ ಕಡ್ಡಾಯವಾಗಿ ನೀಡಬೇಕು. ಸ್ಪರ್ಧೆಗಳನ್ನು ಅಕ್ಟೋಬರ್ ತಿಂಗಳ 8ರಂದು ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ನಡೆಸಲಾಗುವುದು.
ಯುವ ಉತ್ಸವ 2022-23ರಲ್ಲಿ ಪೇಂಟಿಂಗ್, ಕವನ ಬರೆಯುವ ಹಾಗೂ ಹಾಡುವ, ಮೊಬೈಲ ಫೊಟೋಗ್ರಾಫಿ, ಡಿಕ್ಲಮೇಶನ್(ಭಾಷಣ), ಯುವ ಸಂವಾದ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಾರವಾರ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ 08382226965, 9449992195 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾರವಾರ ನೆಹರು ಯುವ ಕೇಂದ್ರದ ಜಿಲ್ಲಾ ಯುವ(ಯುಥ್) ಅಧಿಕಾರಿ ಯಶವಂತ ಯಾದವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.