Slide
Slide
Slide
previous arrow
next arrow

ಪ್ರತಿಭಾ ಕಾರಂಜಿ: ಯಲಕೊಟ್ಟಿಗೆ ಶಾಲಾ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ

300x250 AD

ಹೊನ್ನಾವರ: ತಾಲೂಕಿನ ಉಪ್ಪೋಣಿ ಸಮೂಹ ಸಂಪನ್ಮೂಲ ಕೇಂದ್ರದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಯಲಕೊಟ್ಟಿಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು 4 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.

7 ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ, 4 ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶಾಲೆಯಿಂದ 11 ವಿದ್ಯಾರ್ಥಿಗಳು 19 ಸ್ಪರ್ದೆಗಳಲ್ಲಿ ಭಾಗವಹಿಸಿ 15ರಲ್ಲಿ ಬಹುಮಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

300x250 AD

ಶಾಲೆಯ ಶಿಕ್ಷಕಿ ಶೋಭಾ ಶಾನಭಾಗ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ಬಹುಮಾನ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಭಾರೆ ಮುಖ್ಯ ಶಿಕ್ಷಕ ಸುಬ್ರಾಯ ಶಾನಭಾಗ, ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಗೌಡ, ಉಪ್ಪೋಣಿ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್ ಗೌಡ, ಎಸ್‌ಡಿಎಂಸಿ ಸದಸ್ಯರು, ಪಾಲಕ- ಪೋಷಕರು, ಪೂರ್ವ ವಿದ್ಯಾರ್ಥಿಗಳು, ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share This
300x250 AD
300x250 AD
300x250 AD
Back to top