• Slide
  Slide
  Slide
  previous arrow
  next arrow
 • ಹುಬ್ಬಳ್ಳಿ- ಅಂಕೋಲಾ ರೈಲ್ವೇ ಹೋರಾಟ:ಸಾಮಾಜಿಕ ಜಾಲತಾಣ ಜಾಗೃತಿ ಅಭಿಯಾನಕ್ಕೆ ಚಾಲನೆ

  300x250 AD

  ಅಂಕೋಲಾ: ಹುಬ್ಬಳ್ಳಿ- ಅಂಕೋಲಾ ರೈಲ್ವೇ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ಜಾರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಗಿದೆ.

  ಹೋರಾಟ ಸಮಿತಿ ಅಧ್ಯಕ್ಷ ರಮಾನಂದ ಬಿ.ನಾಯಕ, ಪುರಸಭಾಧ್ಯಕ್ಷೆ ಶಾಂತಲಾ ಅರುಣ ನಾಡಕರ್ಣಿ, ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಉದ್ಯಮಿಗಳ ಸಂಘಟನೆಯ ದೇವಿದಾಸ ಪ್ರಭು, ಅರ್ಬನ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ ನಾರ್ವೇಕರ್, ವಕೀಲರ ಸಂಘಟನೆಯ ನಾಗಾನಂದ ಬಂಟ ಅಂಕೋಲಾ ಅರ್ಬನ್ ಬ್ಯಾಂಕಿನಲ್ಲಿ ಈ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು. ಈ ಅಭಿಯಾನ ವಿವಿಧ ಬ್ಯಾಂಕ್, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.

  ನಿರಂತರ ಹೋರಾಟ: ಈ ಸಂದರ್ಭದಲ್ಲಿ ಮಾತನಾಡಿದ ರಮಾನಂದ ಬಿ. ನಾಯಕ, ಜಿಲ್ಲೆಯ ಜೊತೆಗೆ ಇಡೀ ರಾಜ್ಯದ ಆರ್ಥಿಕ ವಿಕಾಸಕ್ಕೆ ಪೂರಕವಾಗಿರುವ ಈ ಯೋಜನೆಗೆ ಪದೇ ಪದೇ ಅಡ್ಡಿ ಒಡ್ಡಲಾಗುತ್ತಿದ್ದು, ಇದು ನಿಲ್ಲಬೇಕು. ಸರ್ಕಾರ ಈ ಯೋಜನೆ ಬಗ್ಗೆ ಗಟ್ಟಿ ನಿಲುವು ತಳೆಯಬೇಕಿದೆ. ಎಲ್ಲ ಜನಪ್ರತಿನಿಧಿಗಳ ಸಹಕಾರ ಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಯೋಜನೆಯ ಬಗ್ಗೆ ಅಭಿಪ್ರಾಯ ಸಂಗ್ರಹಣೆಗೆ ಬರಲಿರುವ ತಜ್ಞರ ಸಮಿತಿಗೆ ಎಲ್ಲರೂ ಯೋಜನಾಪರ ಅಭಿಪ್ರಾಯ ಸಲ್ಲಿಸಬೇಕು ಎಂದರು.

  300x250 AD

  ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ ಸಮಿತಿಯ ಕಾರ್ಯದರ್ಶಿ ವಿಠ್ಠಲದಾಸ ಕಾಮತ್, ಈ ಯೋಜನೆಯ ಪರ ಜಾಗೃತಿಗಾಗಿ ಸಾಮಾಜಿಕ ಜಾಲತಾಣ ಅಭಿಯಾನ ಆರಂಭಿಸಲಾಗಿದೆ. ಎಲ್ಲರೂ ಟ್ವಿಟರ್, ಫೇಸ್‌ಬುಕ್, ವಾಟ್ಸಪ್ ಮತ್ತಿತರ ಜಾಲತಾಣಗಳಲ್ಲಿ ಯೋಜನಾಪರ ಪೋಸ್ಟ್ ದಾಖಲಿಸಬೇಕು ಎಂದರು.

  ಸಂಚಾಲಕ ಉಮೇಶ ನಾಯ್ಕ ವಂದಿಸಿದರು. ಪ್ರಮುಖರಾದ ಅರುಣ ನಾಡಕರ್ಣಿ, ಕೆ.ಎಚ್.ಗೌಡ, ಪದ್ಮನಾಭ ಪ್ರಭು, ವಿನೋದ ನಾಯಕ ಭಾಸಗೋಡ, ರವೀಂದ್ರ ಕೇಣಿ, ಸಂಜಯ ನಾಯ್ಕ, ಪುರುಶೋತ್ತಮ ನಾಯ್ಕ, ಬ್ಯಾಂಕ್ ಜನರಲ್ ಮ್ಯಾನೇಜರ್ ರವೀಂದ್ರ ವೈದ್ಯ, ಸಂಗಾತಿ ರಂಗಭೂಮಿಯ ಕೆ.ರಮೇಶ, ಪರ್ತಕರ್ತರ ಸಂಘದ ಅರುಣ ಶೆಟ್ಟಿ, ರಾಘು ಕಾಕರಮಠ, ನಾಗರಾಜ ಜಾಂಬಳೇಕರ್, ನಿರ್ದೇಶಕ ಉಮೇಶ ನಾಯ್ಕ, ಪುರಸಭೆ ಸದಸ್ಯ ಮಂಜುನಾಥ ನಾಯ್ಕ ಮತ್ತಿತರ ಸಂಘ- ಸಂಸ್ಥೆಗಳ ಪ್ರತಿನಿಧಿಗಳಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top