Slide
Slide
Slide
previous arrow
next arrow

ಖೋ-ಖೋ: ನ್ಯೂ ಇಂಗ್ಲಿಷ್ ಸ್ಕೂಲ್ ತಂಡ ಜಿಲ್ಲಾ ಮಟ್ಟಕ್ಕೆ

300x250 AD

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್‌ನ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದ ಖೋ- ಖೋ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಎರಡೂ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಗಮನಾರ್ಹ ಸಾಧನೆಯಾಗಿದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಲೋಕೇಶ ಚಂದಾವರಕರ್ ಹಾಗೂ ಯಶ್ವಂತ ಮೇಸ್ತರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದರು. ಪೂರ್ವ ವಿದ್ಯಾರ್ಥಿಗಳಾದ ಆಕಾಶ ಬಾನಾವಳಿ ಮತ್ತು ಗಿರೀಶ್ ಸಹಕಾರ ನೀಡಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರುಗಳು, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯ ಪೂರ್ವವಿದ್ಯಾರ್ಥಿ ಹಾಗೂ ಕ್ರೀಡಾಪಟುಗಳಾದ ಪಿ.ಬಿ.ಶ್ಯಾನಭಾಗ್ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿಪತ್ರ ವಿತರಿಸಿ, ಗೌರವಿಸಿ ಹುರಿದುಂಬಿಸಿದರು.

300x250 AD
Share This
300x250 AD
300x250 AD
300x250 AD
Back to top