ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾಲಿಬಾಲ್ ಫೆಡರೇಷನ್ ವತಿಯಿಂದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಬೀಚ್ ವಾಲಿಬಾಲ್ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕಾಸರಗೋಡ ಇಕೋ ಬೀಚ್ ಕಡಲತೀರದ ಮೇಲೆ ಸೆ.28, 29 ಮತ್ತು 30ರಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9480886551 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು(ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.28ರಿಂದ ಹೊನಲು ಬೆಳಕಿನ ಬೀಚ್ ವಾಲಿಬಾಲ್
