ಯಲ್ಲಾಪುರ: ಕ್ರೀಡೆ ಮನಸ್ಸಿನ ಒತ್ತಡ ನಿವಾರಿಸಿ ಮನೋರಂಜನೆ ಜೊತೆಗೆ ನೆಮ್ಮದಿ ನೀಡುತ್ತದೆ ಎಂದು ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ ಹೇಳಿದರು.
ಮಳೆಯ ಕಾರಣದಿಂದ ಮುಂದೂಡಲಾಗಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟವನ್ನು ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಶ್ಯಾಮಿಲಿ ಪಾಠಣಕರ ಭಾಗವಹಿಸಿದ್ದರು. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಜಯ ನಾಯಕ, ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಆರ್.ನಾಯಕ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಎಸ್.ಸಿ., ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ ನಾಯಕ, ಶಿಕ್ಷಣ ಸಂಯೋಜಕ ಷಣ್ಮುಖ ಹೆಗಡೆ, ಪ್ರಶಾಂತ ಜಿ.ಎನ್. ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ವಂದಿಸಿದರು.