Slide
Slide
Slide
previous arrow
next arrow

ಕ್ರೀಡಾಕೂಟ;ಕಿಬ್ಬಳ್ಳಿ ಶಾಲಾ ವಿದ್ಯಾರ್ಥಿಗಳ ಸಾಧನೆ

300x250 AD

ಸಿದ್ದಾಪುರ: ತಾಲೂಕಿನ ಪ್ರೌಢಶಾಲೆಗಳ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ಸಾಧನೆಯನ್ನು ಮಾಡಿದ್ದಾರೆ ‌‌‌‌. ಗಂಡು ಮಕ್ಕಳ ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ, ಹೆಣ್ಣು ಮಕ್ಕಳ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಖೋಖೋ ದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು , ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಇವರ ಈ ಸಾಧನೆಯನ್ನು ಶ್ರೀ ಮಹಾಗಣಪತಿ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕವೃಂದ ಬೋಧಕೇತರ ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕರಾದ ಕೆ ಟಿ ನಾಯ್ಕ ಅವರು ಮಾರ್ಗದರ್ಶನ ಮಾಡಿದ್ದರು.

300x250 AD
Share This
300x250 AD
300x250 AD
300x250 AD
Back to top