ಶಿರಸಿ: ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ಭೂಮಿ ಹಕ್ಕು ಮತ್ತು ಮೂಲಭೂತ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮವನ್ನ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ ಅಮ್ಮಿನಳ್ಳಿ ಸಭಾಂಗಣದಲ್ಲಿ ಸೆ.24ರಂದು ಮುಂಜಾನೆ 10 ಗಂಟೆಗೆ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಜಾನ್ಮನೆಯಲ್ಲಿ ಸೆ.24ರಂದು ಅತಿಕ್ರಮಣದಾರರ ಸಭೆ
