ಭಟ್ಕಳ: ಸ್ವಚ್ಛತಾ ಅಭಿಯಾನದ ಅಂಗವಾಗಿ ಭಾರತ ಮತ್ತು ಗಾರ್ಬೇಜ್ ಕಾರ್ಯಕ್ರಮದ ಅಡಿಯಲ್ಲಿ ಜೆಸಿಐ ಭಟ್ಕಳ ಸಿಟಿ ಹಾಗೂ ಪುರಸಭೆಯ ಸಹಭಾಗಿತ್ವದಲ್ಲಿ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು ಮತ್ತು ಅಂಜುಮಾನ್ ಬಾಲಕರ ಶಾಲೆ ವಿದ್ಯಾರ್ಥಿಗಳೊಂದಿಗೆ ಶ್ರೀ ಗುರು ಸುಧೀಂದ್ರ ಕಾಲೇಜು ಆವರಣದಿಂದ ಸರ್ಕಲ್ ಮಾರ್ಗವಾಗಿ ಪುರಸಭೆ ಆವರಣದವರೆಗೆ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳ ಬೀದಿ ನಾಟಕ ಮೂಲಕ ಪ್ಲಾಸ್ಟಿಕ್ ಇತ್ಯಾದಿ ಕಸಗಳಿಂದ ಪರಿಸರವನ್ನು ಸಂರಕ್ಷಿಸಿಕೊಳ್ಳುವ ಬಗ್ಗೆ ಜನಜಾಗೃತಿ ಜೊತೆಗೆ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಲಾಯಿತು.
ದಿ ನ್ಯೂ ಇಂಗ್ಲಿಷ್ ಕಾಲೇಜ್ ಪ್ರಾಂಶುಪಾಲ ವೀರೇಂದ್ರ ಶಾನಭಾಗ, ಜೆಸಿಐ ಭಟ್ಕಳ ಸಿಟಿಯ ಅಧ್ಯಕ್ಷ ಪಾಂಡುರಂಗ ನಾಯ್ಕ, ಪುರಸಭೆಯ ಆರೋಗ್ಯಾಧಿಕಾರಿ ಶ್ರೀಮತಿ ಸೋಜಿಯಾ ಮೇಡಂ, ಜೆಸಿಐ ಎಸ್ ಎಮ್ ಎ ಚೇರ್ಮನ್ ಸೆನೆಟರ್ ಅಬ್ದುಲ್ ಜಬ್ಬರ್ ಸಾಹೇಬ್, ಜೆಸಿ ಭಟ್ಕಳ ಸಿಟಿಯ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಸುರೇಶ್ ಪೂಜಾರಿ, ಕಾರ್ಯದರ್ಶಿ ಜೆಸಿ ಮನೋಹರ್ ನಾಯ್ಕ, ಅಂಜುಮನ್ ಶಾಲೆಯ ಶಿಕ್ಷಕರಾದ ಅಬ್ದುಲ ವಾಫಿ, ಜೆಸಿಐ ಭಟ್ಕಳ ಸಿಟಿಯ ಸದಸ್ಯರುಗಳು ಪುರಸಭೆಯ ಸಿಬ್ಬಂದಿಗಳು, ದಿ ನ್ಯೂ ಇಂಗ್ಲಿಷ್ ಕಾಲೇಜಿನ ಶಿಕ್ಷಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.