Slide
Slide
Slide
previous arrow
next arrow

ಕ್ರೀಡಾಕೂಟ: ಕುಂಟವಾಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

300x250 AD

ಭಟ್ಕಳ: ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಕುಂಟವಾಣಿ ಸರಕಾರಿ ಪ್ರೌಢಶಾಲೆಯ ಮಕ್ಕಳು ಗಮನಾರ್ಹ ಸಾಧನೆ ಮಾಡಿದ್ದಾರೆ. 100 ಮೀ. ಓಟ ಹಾಗೂ 100 ಮೀ. ಹರ್ಡಲ್ಸ್ನಲ್ಲಿ ಸಂಜನಾ ಗೊಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದೇ ರೀತಿ ಗುಂಡು ಎಸೆತದಲ್ಲಿ ಮಹೇಶ್ರೀ ಗೊಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಜೊತೆಗೆ ಲೋಹಿತ ಮರಾಠಿ ಗುಂಡು ಎಸೆತದಲ್ಲಿ ತೃತೀಯ, ಮಂಜುನಾಥ ಗೊಂಡ ಉದ್ದಜಿಗಿತದಲ್ಲಿ ತೃತೀಯ, ಗುಂಪು ಆಟದಲ್ಲಿ ಖೋಖೋದಲ್ಲಿ ದ್ವಿತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಾರುತಿ ನಾಯ್ಕರವರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದು, ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು, ಪಾಲಕ- ಪೋಷಕರು, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರು ಶ್ಲಾಘಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top