
ಮುಂಡಗೋಡ: ಅನಾರೋಗ್ಯದಿಂದ ಬಳಲುತ್ತಿದ್ದ ಹೆಂಡತಿಗೆ ಸಾಲ ಮಾಡಿ ಚಿಕಿತ್ಸೆ ಕೊಡಿಸಿದರು ಬದುಕಲಿಲ್ಲ, ಮಾಡಿದ ಸಾಲವನ್ನು ತೀರಿಸಲಾಗದೆ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಳ್ಳಿ ಬೆಳಕು ಗ್ರಾಮದಲ್ಲಿ ಜರುಗಿದೆ.
ಜಾನು ಕೊಕರೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವನು ಕಳೆದ ಆರು ತಿಂಗಳು ಹಿಂದೆ ಅವನ ಹೆಂಡತಿ ರತ್ನಾಬಾಯಿ ತೀರಿಕೊಂಡಿದ್ದರಿಂದ ಹಾಗು ಅವಳ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರಿಂದ ಇದೆ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯ ಹಿತ್ತಲಿನ ಅಡ್ಡ ಎಳೆಗೆ ಬಟ್ಟೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಸಹೋದರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.