ಸಿದ್ದಾಪುರ; ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಪಟ್ಟಣ ಪಂಚಾಯತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿವಿಧ ಸ್ಪರ್ಧೆಗಳನ್ನು ಆಡಿಸಿ ಬಹುಮಾನವನ್ನು ವಿತರಣೆ ಮಾಡಲಾಯಿತು.
ಪಟ್ಟಣ ಪಂಚಾಯತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಸಾಂದರ್ಭಿಕವಾಗಿ ಮಾತನ್ನಾಡಿದರು. ಉಪಾಧ್ಯಕ್ಷ ರವಿಕುಮಾರ ನಾಯ್ಕ ಮಾತನಾಡಿ, ಪೌರಕಾರ್ಮಿಕರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಸರಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ ಮಾತನಾಡಿ, ಪೌರಕಾರ್ಮಿಕರು ಕೋವಿಡ್ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಪಟ್ಟಣದ ಸ್ವಚ್ಛತೆಗೆ ಹಗಲಿರುಳು ಕಾರ್ಯನಿರ್ವಹಿಸಿರುತ್ತಾರೆ ಎಂದರು. ಸದಸ್ಯರಾದ ನಂದನ ಬೋರ್ಕರ, ಪಟ್ಟಣ ಪಂಚಾಯತಿ ನೌಕರರು ಉತ್ತಮ ಕೆಲಸ ನಿರ್ವಹಿಸುತ್ತಿದ್ದು, ಸರಕಾರ ಇವರ ಸೇವೆಯನ್ನು ಗುರುತಿಸಿ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ದೀಪಾ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ನಿರೀಕ್ಷಕಿ ಲಕ್ಷ್ಮೀ ನಾಯ್ಕ ನಿರ್ವಹಿಸಿದರು. ರಮೇಶ ಕೆ.ಎಸ್. ವಂದಿಸಿದರು. ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಸನ್ಮಾನಿಸಿ, ಗೌರವಧನದ ಚೆಕ್‌ಗಳನ್ನು ವಿತರಿಸಲಾಯಿತು.
ಸದಸ್ಯರಾದ ಕವಿತಾ ಹೆಗಡೆ, ವೆಂಕೋಬ, ನಂದನ ಬೋರ್ಕರ, ರಾಧಿಕಾ ಕಾನಗೋಡ, ನಾಮನಿರ್ದೇಶಿತ ಸದಸ್ಯರಾದ ಸುರೇಶ ನಾಯ್ಕ, ರಾಜೇಂದ್ರ ಕಿಂದ್ರಿ, ಮಂಜುನಾಥ ಭಟ್, ಆರೋಗ್ಯ ಇಲಾಖೆಯ ಡಾ.ನಾಡಿಗೇರ್, ಮುಖ್ಯಾಧಿಕಾರಿ ಕುಮಾರ ಡಿ.ನಾಯ್ಕ ಹಾಗೂ ಸಿಬ್ಬಂದಿ ಇದ್ದರು.