ದಾಂಡೇಲಿ: ಯುಜಿಡಿ ಗುತ್ತಿಗೆ ಸಂಸ್ಥೆಯ ಕಾರ್ಮಿಕನೋರ್ವ ನೇಣಿಗೆ ಶರಣಾದ ಘಟನೆ ನಗರದ ಅಂಬೇವಾಡಿಯಲ್ಲಿ ನಡೆದಿದೆ.
ನಗರದ ಯುಜಿಡಿ ಗುತ್ತಿಗೆ ಸಂಸ್ಥೆಯಲ್ಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ರಾಂಚಿ, ಜಾರ್ಖಾಂಡ್ ಮೂಲದ ಸೋಮ್ರಾ ಮುಂಡ (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.
ಈತ ಕುಡಿತದ ಚಟಕ್ಕೆ ಬಿದ್ದಿದ್ದ ಎಂದು ಮೂಲಗಳಿಂದ ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಪಿಎಸೈ ಕಿರಣ್ ಪಾಟೀಲ, ಎಎಸೈಗಳಾದ ಬಸವರಾಜ ಒಕ್ಕುಂದ, ಮೆಹಬೂಬ ನಿಂಬುವಾಲೆ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಯುಜಿಡಿ ಗುತ್ತಿಗೆ ಸಂಸ್ಥೆ ಕಾರ್ಮಿಕ ನೇಣಿಗೆ ಶರಣು
