Slide
Slide
Slide
previous arrow
next arrow

ಕಾಮಗಾರಿಗಳನ್ನ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಪ್ರಿಯಾಂಗಾ ಎಮ್.ಸೂಚನೆ

300x250 AD

ಕಾರವಾರ: ಸಿಎಮ್‌ಜಿಎಸ್‌ವಾಯ್, ಲಿಂಕ್ಡ್ ಡಾಕ್ಯುಮೆಂಟ್ ಹಾಗೂ 15ನೇ ಹಣಕಾಸು ಅನುದಾನ ನಿಧಿಗಳ ಮೂಲಕ ಕೈಗೊಂಡ ಪ್ರಸಕ್ತ ಸಾಲಿನ ಕಾರ್ಯಕ್ರಮಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ವರದಿಯನ್ನು ಕಚೇರಿಗೆ ಸಲ್ಲಿಸಬೇಕು ಎಂದು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಸಿಇಒ ಪ್ರಿಯಾಂಗಾ ಎಮ್. ತಿಳಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜರುಗಿದ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆಡಳಿತಾಧಿಕಾರಿ ಪಿ.ಹೇಮಲತಾ ಅವರಿಗೆ ಸಭೆಯ ಕುರಿತಾದ ಇಲ್ಲಿಯವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ ಅಧೀನದಲ್ಲಿ ವಿವಿಧ ಇಲಾಖೆಗಳಡಿಯಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಕುರಿತು ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತಿ ಮೂಲಕ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾದ ಕಾರ್ಯಗಳನ್ನು ತಿಳಿಸಿ, ಜಲಜೀವನ ಮಿಷನ್, ಘನತಾಜ್ಯ ಘಟಕ, ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಾಧಿಸಲಾದ ಪ್ರಗತಿಯನ್ನು ಕುರಿತು ಹೇಳಿದರು. ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ವರದಿ, ವಿಕಲಚೇತನರ ಅಭಿವೃದ್ಧಿಗಾಗಿ ವ್ಯಯಿಸಿದ ಹಾಗೂ ವ್ಯಯಿಸಲು ನಿಧಿ ಇಟ್ಟಿರುವ ವರದಿ, 18 ಪಂಚಾಯತ ಸೇರಿಸಿಕೊಂಡು ಶಿರಸಿಯಲ್ಲಿ ಮಟಿರಿಯಲ್ ರಿಕವರಿ ಫೆಸಿಲಿಟಿ ಕಾರ್ಯಕ್ರಮ ಪ್ರಗತಿ ವರದಿ, ಶಾಲೆ, ಅಂಗನವಾಡಿ, ಸಮುದಾಯಗಳಿಗೆ ಸಂಬಂಧಿಸಿದಂತೆ ಮೂಲಭೂತ ಸವಲತ್ತುಗಳನ್ನು ಒದಗಿಸಲು ಮಾಡಿರುವ ಕ್ರಿಯಾ ಯೋಜನೆ ಹಾಗೂ ಅನುಷ್ಠಾನ ಕುರಿತು ವರದಿ ನೀಡಿದರು.
ಸಭೆಯಲ್ಲಿ 2022-23ನೇ ಸಾಲಿನಲ್ಲಿ 15ನೇ ಹಣಕಾಸು ಅನುದಾನದಡಿಯಲ್ಲಿ ಜಿಲ್ಲಾ ಪಂಚಾಯತಕ್ಕೆ ಬಿಡುಗಡೆಯಾದ 3,77,71,584 ರೂ. ಮೊತ್ತದ ಕ್ರಿಯಾಯೋಜನೆ, 2021-22ನೇ ಸಾಲಿನ 15ನೇ ಹಣಕಾಸು ಅನುದಾನದಡಿಯಲ್ಲಿ 61.29 ಲಕ್ಷ ರೂಪಾಯಿ ಮೊತ್ತದ ಕಾಮಗಾರಿ ಬದಲಾವಣೆ, 2020-21ನೇ ಸಾಲಿನ 16 ಲಕ್ಷ ರೂ. ಮೊತ್ತದ ಕಾಮಗಾರಿ ಬದಲಾವಣೆ ಹಾಗೂ ಅನಿರ್ಬಂಧಿತ 190.05 ಲಕ್ಷದ ಕಾಮಗಾರಿ ಬದಲಾವಣೆಗೆ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತಾಧಿಕಾರಿ ಪಿ.ಹೇಮಲತಾ ಅವರಿಂದ ಅನುಮೋದನೆ ಪಡೆದುಕೊಳ್ಳಲಾಯಿತು. ವಿವಿಧ ಇಲಾಖೆಗಳ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಬಾಹ್ಯ ನೌಕರರ ಸಂಬಳ, ಹೆಚ್ಚುವರಿ ಅನುದಾನದ ಬೇಡಿಕೆ ಏನಾದರೂ ಇದ್ದಲ್ಲಿ ಸಂಬಂಧಿಸಿದ ಇಲಾಖಾ ಮುಖ್ಯಸ್ಥರು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕಾರವಾರ ಜಿಲ್ಲಾ ಪಂಚಾಯತಿ ಅಧಿಕಾರಿ ವಿನೋದ ಅನ್ವೇಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

300x250 AD
Share This
300x250 AD
300x250 AD
300x250 AD
Back to top