Slide
Slide
Slide
previous arrow
next arrow

ಹನುಮಾನಗಲ್ಲಿ ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

300x250 AD

ಜೊಯಿಡಾ: 186 ಮಕ್ಕಳಿರುವ ತಾಲೂಕಿನ ರಾಮನಗರದ ಹನುಮಾನಗಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲದೆ ವಿದ್ಯೆಗಾಗಿ ಹೊಂದಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಹನುಮಾನಗಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಮಕ್ಕಳು ಶಿಕ್ಷಣ ಕಲಿಯುತ್ತಿದ್ದು, ಕೇವಲ ಏಳನೇ ತರಗತಿ ಮಕ್ಕಳಿಗೆ ಮಾತ್ರ ಕುಳಿತುಕೊಳ್ಳಲು ಬೆಂಚ್‌ಗಳಿವೆ. ಉಳಿದ ಎಲ್ಲಾ ಮಕ್ಕಳು ಮಳೆ- ಚಳಿಗಾಲ ಎನ್ನದೇ ನೆಲದ ಮೇಲೆಯೇ ಕುಳಿತು ಪಾಠ ಕೇಳಬೇಕಿದೆ. ಅದರಲ್ಲೂ ಮಳೆಗಾಲದಲ್ಲಿ ಶಾಲಾ- ಕೊಠಡಿಗಳಲ್ಲಿ ಮಳೆ ನೀರು ಬಂದು ತೇವವಾದ ನೆಲದ ಮೇಲೆ ಕುಳಿತು ಪಾಠ ಕೇಳಬೇಕಿದ್ದು, ಈ ಬಗ್ಗೆ ತಿಳಿದೂ ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆಂಬುದಕ್ಕೆ ಇದು ಸಾಕ್ಷಿಯಾಗಿದೆ.
ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರಿಯಾದ ಸಮಯಕ್ಕೆ ನೀರು ಸಿಗುತ್ತಿಲ್ಲ ಎಂಬುದು ಇಲ್ಲಿಯ ಶಾಲಾ ಮಕ್ಕಳ ಗೋಳಾಗಿದೆ. ಅಲ್ಲದೇ ಶೌಚಾಲಯಕ್ಕೆ, ಅಡುಗೆ ಮಾಡಲು ನೀರಿನ ಸಮಸ್ಯೆ ಉಂಟಾಗುತ್ತಿದೆ. 186 ಮಕ್ಕಳಿರುವ ಶಾಲೆಯಲ್ಲಿ ಒಂದೇ ಶೌಚಾಲಯ ಇದ್ದು, ಹೊಸ ಶೌಚಾಲಯ ಗ್ರಾಮ ಪಂಚಾಯತಿಯಿಂದ ನಿರ್ಮಿಸಿದರು ಕೂಡ ಈವರೆಗೆ ಉದ್ಘಾಟನೆಯಾಗಿಲ್ಲ. ನೀರಿನ ವ್ಯವಸ್ಥೆ, ಸೆಪ್ಟಿಕ್ ಟ್ಯಾಂಕ್ ವ್ಯವಸ್ಥೆ ಕೂಡ ಆಗಿಲ್ಲ. 6 ಕೊಠಡಿಗಳು ಇಲ್ಲಿದ್ದು, ಇನ್ನೂ 2 ಕೊಠಡಿಗಳ ಅವಶ್ಯಕತೆ ಇದೆ ಎಂಬುದು ಕೆಲ ಪಾಲಕರ ದೂರಾಗಿದೆ. ಈ ಬಗ್ಗೆ ತಕ್ಷಣವೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಣ್ತೆರದು ನೋಡಬೇಕಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಬೇಕಿದೆ.


ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕೂಡಲೇ ಶಾಲೆಗೆ ಭೇಟಿ ನೀಡಿ ನಮ್ಮ ಇಲಾಖೆಯಿಂದ ಸಿಗಬೇಕಾದ ವ್ಯವಸ್ಥೆ ಮಾಡುತ್ತೇನೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ಮೂಲಸೌಕರ್ಯದ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ.
• ಬಶೀರ್ ಶೇಖ್, ಕ್ಷೇತ್ರ ಶಿಕ್ಷಣಾಧಿಕಾರಿ

300x250 AD

ನಮ್ಮ ಶಾಲೆಗೆ ಮೂಲ ಸೌಕರ್ಯಗಳ ಕೊರತೆ ಇದೆ. ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಾಗಿದ್ದು, ಬೆಂಚ್ ವ್ಯವಸ್ಥೆ ಮಾಡಿಕೊಡಬೇಕಿದೆ. ನೀರಿನ ವ್ಯವಸ್ಥೆ, ಶಾಲಾ ಕೊಠಡಿ ಕೂಡಾ ಅಗತ್ಯವಿದೆ.
• ಮಹಾದೇವ ಗಾವಡೆ, ಎಸ್‌ಡಿಎಂಸಿ ಅಧ್ಯಕ್ಷ

Share This
300x250 AD
300x250 AD
300x250 AD
Back to top