Slide
Slide
Slide
previous arrow
next arrow

ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

300x250 AD

ಕುಮಟಾ: ಪುರಸಭೆಯ ಹಿಂದಿನ ಮುಖ್ಯಾಧಿಕಾರಿ ಸುರೇಶ ಎಂ.ಕೆ. ಅವರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆ ನಡೆಸಿ ಸಾರ್ವಜನಿಕರಿಗೆ ಆ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ನೇತೃತ್ವದಲ್ಲಿ ಪುರಸಭೆ ಎದುರು ಜಮಾಯಿಸಿದ ಕಾರ್ಯಕರ್ತರು, ಪುರಸಭೆಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಘೋಷಣೆ ಕೂಗಿದರು.

ಪುರಸಭೆಯ ಹಿಂದಿನ ಮುಖ್ಯಾಧಿಕಾರಿ ಸುರೇಶ ಎಂ ಕೆ ಅವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಇಲ್ಲಿಂದ ವರ್ಗಾವಣೆ ಮಾಡಲಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅವರು ಹೇಳಿಕೆ ನೀಡಿದ್ದರು. ಅವರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಗಿತ್ತು. ಆದರೆ ಇದುವರೆಗೂ ತನಿಖೆ ನಡೆಸದೇ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿದ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ, ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಅವರು, ಕುಮಟಾ ಪುರಸಭೆ ಹಿಂದಿನ ಮುಖ್ಯಾಧಿಕಾರಿ ಸುರೇಶ ಎಂ ಕೆ ಏಕಾಏಕಿ ವರ್ಗಾವಣೆಯಾಗುತ್ತಾರೆ. ಈ ಬಗ್ಗೆ ಪ್ರಶ್ನಿಸಿದಾಗ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. 22 ಇಲಾಖೆ ಮುಖ್ಯಸ್ಥರಾಗಿರುವ ಶಾಸಕರು ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಜಿಲ್ಲಾಡಳಿತ, ತಾಲೂಕಾಡಳಿತ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಈತನ ತನಿಖೆಯಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಈ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸದಿದ್ದರೆ, ಭ್ರಷ್ಟಾಚಾರದ ವಿರುದ್ಧ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಬಗ್ಗೆ ಉಪವಿಭಾಗಾಧಿಕಾರಿ ಸ್ಥಳಕ್ಕಾಗಮಿಸಿ, ಲಿಖಿತ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು, ರಸ್ತೆಯಲ್ಲಿ ಕಳಿತು ಪ್ರತಿಭಟನೆ ನಡೆಸಲು ಮುಂದಾದಾಗ ಪಿಎಸ್‌ಐ ರವಿ ಗುಡ್ಡಿ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿದರು. ಬಳಿಕ ಸ್ಥಳಕ್ಕಾಗಮಿಸಿದ ಗ್ರೇಡ್-2 ತಹಸೀಲ್ದಾರ ಸತೀಶ ಗೌಡ ಮನವಿ ಸ್ವೀಕರಿಸಿ, ಮೇಲಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಕೃಷ್ಣ ಗೌಡ, ಮಹೇಶ ನಾಯ್ಕ, ಹನುಮಂತ ಪಟಗಾರ, ಬಲೀಂದ್ರ ಗೌಡ, ಜಗದೀಶ ನಾಯ್ಕ, ಜಗ್ಗು ನಾಯ್ಕ, ಮೋಹನ ಪಟಗಾರ, ಹೊನ್ನಪ್ಪ ಪಟಗಾರ, ದಿನೇಶ ಭಂಡಾರಿ ಹಾಗು ಇತರರು ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top