ಯಲ್ಲಾಪುರ: ತಾಲೂಕಿನ ಕಣ್ಣಿಗೇರಿಯ ನಂದನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 13 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ.
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ನಂದನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆಯ್ಕೆಯಾದ ನೂತನ ನಿರ್ದೇಶಕರುಗಳಿಗೆ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಣಪತಿ ಮುದ್ದೇಪಾಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಕೈಟಕರ್ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಸಹಕಾರಿ ಸಂಘದ ನೂತನ ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.