Slide
Slide
Slide
previous arrow
next arrow

ಉಳವಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

300x250 AD

ಜೊಯಿಡಾ: ತಾಲೂಕಿನ ನಂದಿಗದ್ದಾ ಪ್ರಾಥಮಿಕ ಶಾಲಾ ಮಕ್ಕಳ ಕ್ಲಸ್ಟರ್ ಮಟ್ಟಡ ಪ್ರತಿಭಾ ಕಾರಂಜಿಯನ್ನು ಉಳವಿಯಲ್ಲಿ ಉಳವಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಲಾ ಮಿರಾಶಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೋಯಿಡಾ ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಶೇಖ್ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ, ಮಕ್ಕಳು ಹೆಚ್ಚಾಗಿ ಇಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾರವಾರದ ನರೇಂದ್ರ ದೇಸಾಯಿಯವರು ತಮ್ಮ ಟ್ರಸ್ಟ್ ವತಿಯಿಂದ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಸ್ಕೂಲ್ ಬ್ಯಾಗ್ ವಿತರಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯರಾದ ಮಂಜುನಾಥ ಪಡಸಲಗಿ, ಜಾಯಿದ್ ಶೇಖ್, ರೆಹಮತುಲ್ಲಾ ಖಾನ್, ಗಣೇಶ ಬಿ., ಹೇಮಾ ಹೆಗಡೆಕಾರ್ ಶಿಕ್ಷಕರ ಸಂಘದ ಅಧ್ಯಕ್ಷ ಯಶವಂತ ನಾಯ್ಕ, ಸಿಆರ್‌ಪಿ ಭಾಸ್ಕರ ಗಾಂವ್ಕರ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top