ಕುಮಟಾ: ಹೊನ್ನಾವರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಲಭಾಗದ ಕೊಂಕಣ ಎಜುಕೇಷನ್ ಸೊಸೈಟಿಯ ಬಿ.ಕೆ. ಭಂಡಾರಕರ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿನ ಹಾಗೂ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿಜ್ಞಾನ ವಿಭಾಗದ ಕು.ಆಕಾಂಕ್ಷಾ ಬಿ.ಎಮ್., ಕು.ಅಭಿರಾಮ ಎ.ಎನ್. ಮತ್ತು ವಾಣಿಜ್ಯ ವಿಭಾಗದ ಕು.ಚೇತನ ಭಂಡಾರಿ, ಮೂವರು ವಿದ್ಯಾರ್ಥಿಗಳು ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಹಾಗೂ ಕು.ಚಾರ್ವಿ ವಾಳ್ಕೆ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ.
ಮಕ್ಕಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ವಿಶ್ವಸ್ಥರು, ವಿಧಾತ್ರಿ ಅಕಾಡೆಮಿಯ ಗುರುರಾಜ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಕಿರಣ ಭಟ್ಟ, ಉಪ ಪ್ರಾಂಶುಪಾಲ ಶ್ರೀಮತಿ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕ ದೀಪಕ್ ನಾಯ್ಕ ಹಾಗೂ ಎಲ್ಲಾ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.