ಶಿರಸಿ: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಇಲ್ಲಿನ ಎಂ.ಇ.ಎಸ್ ಆಡಳಿತ ಮಂಡಳಿಗೆ ಸಂಸ್ಥೆಯ ಹಾಲಿ ಅಧ್ಯಕ್ಷರಾದ ಜಿ.ಎಂ.ಹೆಗಡೆ ಮುಳಖಂಡ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಹಾಟ್ರಿಕ್ ಗೆಲುವಿನ ಸಾಧನೆ ಮಾಡಿದ್ದಾರೆ.
ಗುರುವಾರ ಸಂಸ್ಥೆಯ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಮುಳಖಂಡರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಭೀಮಣ್ಣ ನಾಯ್ಕ, ನಿತಿನ್ ಕಾಸರಗೋಡು, ಖಜಾಂಚಿಯಾಗಿ ಸುಧೀರ್ ಭಟ್ಟ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಪಿ.ಶೆಟ್ಟರ್ ಆಯ್ಕೆಗೊಂಡಿದ್ದಾರೆ. ಈ ವೇಳೆ ಸಂಸ್ಥೆಯ ಎಲ್ಲ ನೂತನ ನಿರ್ದೇಶಕರು ಉಪಸ್ಥಿತರಿದ್ದರು.