Slide
Slide
Slide
previous arrow
next arrow

ಆಸಕ್ತಿಗೆ ಅನುಗುಣವಾಗಿ ಕ್ರಿಯಾತ್ಮಕವಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿ:ಉಪೇಂದ್ರ ಪೈ

300x250 AD

ಶಿರಸಿ : ಮಕ್ಕಳು ಸಹಜವಾಗಿ ಕಲಿಯುವಂತಹ ವಾತಾವರಣ ನಿರ್ಮಿಸುವ ಅಗತ್ಯವಿದ್ದು ಮಕ್ಕಳಿಗೆ ಕಲಿಕೆ ಒತ್ತಡ ಉಂಟುಮಾಡದ ರೀತಿಯಲ್ಲಿ ಬೋಧಿಸುವ ಅಗತ್ಯವಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.

ಅವರು ತಾಲೂಕಿನ ಹುಲೇಕಲ್ ಶ್ರೀದೇವಿ ಪ್ರೌಢ ಶಾಲೆಯ 180 ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ವತಿಯಿಂದ ಉಚಿತ ಪಠ್ಯ ಪುಸ್ತಕ, ಕ್ರೀಡಾ ಸಾಮಗ್ರಿ ವಿತರಿಸಿ ನಂತರ ಮಾತನಾಡಿದ ಅವರು ಮಕ್ಕಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪೋಷಕರು ಯೋಚಿಸಬೇಕಿದೆ. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರಿಯಾತ್ಮಕವಾದ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೊಳ್ಳಲು ಪ್ರೇರೇಪಿಸಬೇಕಿದೆ. ಪೋಷಕರು ಮತ್ತು ಶಿಕ್ಷಕರು ನಿರಂತರ ಸಂಪರ್ಕದಲ್ಲಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಶ್ರಮಿಸಬೇಕಿದೆ. ಪೋಷಕರು ಶಾಲೆಗೆ ಆಗಾಗ ಬೇಟಿ ನೀಡಿ ಮಕ್ಕಳ ಶಿಕ್ಷಣದ ಬಗ್ಗೆ ಗಮನ ಹರಿಸಬೇಕಿದೆ ಎಂದರು.

300x250 AD

ಸಂಸ್ಥೆಯ ಕಾರ್ಯದರ್ಶಿ ಶಾಂತಾರಾಮ ಹೆಗಡೆ ಮಾತನಾಡಿ ಶಾಲೆಯೂ ಮಕ್ಕಳಿಗೆ ಎರಡನೇ ಮನೆಯಿದ್ದಂತೆ. ಶಿಕ್ಷಣವನ್ನು ಮನಮುಟ್ಟುವಂತೆ ವಿದ್ಯಾರ್ಥಿಗಳಿಗೆ ಕಲಿಸಲು ಹೊಸ ಹೊಸ ಕಲಿಕಾ ವಿಧಾನಗಳನ್ನು ಶಾಲೆಯಲ್ಲಿ ಅಳವಡಿಸಿಕೊಂಡು ಬೋಧಿಸಲಾಗುತ್ತಿದೆ ಎಂದರು. ಶಾಲೆಯ ಮುಖ್ಯೋಪಾಧ್ಯಾಯರು ಮಾತನಾಡಿ ಶಿಕ್ಷಣದಿಂದ ಅತ್ಮಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಿದ್ದು ಶಿಕ್ಷಣದಿಂದ ಮಾತ್ರ ಸಮಗ್ರ ಅಭಿವೃದ್ದಿ ಸಾಧ್ಯ. ಪಠ್ಯ ಪುಸ್ತಕಗಳು ನಮಗೆ ಅವಶ್ಯಕವಾದ ಜ್ಞಾನ ನೀಡುತ್ತವೆ. ಪುಸ್ತಕದ ಜೊತೆಗೆ ಶಿಕ್ಷಕರು ಮಾಡುವ ಪಾಠದ ವಿಶ್ಲೇಷಣೆಯಿಂದ ಮಕ್ಕಳು ಶಾಲೆಯಲ್ಲಿ ಬರೀ ಪುಸ್ತಕದ ಹುಳುಗಳಾಗದೇ ಇತರ ಚಟುವಟಿಕೆಯಲ್ಲೂ ಭಾಗವಹಿಸಿ ಜ್ಞಾನವಂತರಾಗುತ್ತಾರೆ ಎಂದರು. ಈ ಸಂದರ್ಭದಲ್ಲಿ ವಿ ವಿ ಹೆಗಡೆ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top