Slide
Slide
Slide
previous arrow
next arrow

ಮಧ್ಯವರ್ತಿಗಳ ಮಾತಿಗೆ ಮರುಳಾಗದಿರಿ; ಸಚಿವ ಹೆಬ್ಬಾರ್

300x250 AD

ಕಾರವಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ಘೋಷಿಸಲ್ಪಟ್ಟ ಯೋಜನೆಗಳಲ್ಲಿ ಯಾರೂ ಯಾವುದೇ ಮಧ್ಯವರ್ತಿಗಳ ಮಾತಿಗೆ ಮರುಳಾಗಿ ಶೋಷಣೆಗೆ ಒಳಗಾಗಬಾರದು. ಮಂಡಳಿಯು ಕಾರ್ಮಿಕರ ಕಲ್ಯಾಣಕ್ಕೆ ಸದಾ ಬದ್ಧವಾಗಿರುತ್ತದೆ ಎಂದು ಕಾರ್ಮಿಕ ಸಚಿವ ಹಾಗೂ ಮಂಡಳಿಯ ಅಧ್ಯಕ್ಷ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಕಲ್ಯಾಣ ಮಂಡಳಿಯಿAದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಲವು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಹಾಗೂ ವಿವಿಧ ಸೌಲಭ್ಯಗಳಡಿಯಲ್ಲಿ ಸಹಾಯಧನಗಳನ್ನು ನೀಡಲಾಗುತ್ತಿದೆ. ಮಂಡಳಿಯ ವತಿಯಿಂದ ಶೈಕ್ಷಣಿಕ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಸೌಲಭ್ಯಗಳ ವಿತರಣೆಯನ್ನೂ ಸಹ ಪಾರದರ್ಶಕವಾಗಿ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಕೆಲವು ಆನಾಮಧೇಯ ವ್ಯಕ್ತಿಗಳು ತಾವು ಕೆಲಸ ಮಾಡಿಸಿಕೊಡುತ್ತೇವೆಂದು ಹೇಳಿ ನಿಯಮ ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದಾಗಿ ದೂರುಗಳು ಕೇಳಿ ಬಂದಿವೆ ಎಂದು ತಿಳಿಸಿದ್ದಾರೆ.

300x250 AD

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಕಾರ್ಮಿಕರಿಗೆ ದೊರಕಬಹುದಾದ ಎಲ್ಲಾ ಸೌಲಭ್ಯಗಳನ್ನು ಪಾರದರ್ಶಕವಾಗಿ ಕಾಲಮಿತಿಯೊಳಗೆ ತಲುಪಿಸುವ ಕರ್ತವ್ಯವನ್ನು ನಿರ್ವಹಿಸುತ್ತಿದೆ. ಯಾವುದೇ ದೂರುಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆ/ಮಂಡಳಿಯ ಕೇಂದ್ರ ಕಛೇರಿ ಅಥವಾ ಕಾರ್ಮಿಕ ಸಹಾಯವಾಣಿ ೧೫೫೨೧೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top