Slide
Slide
Slide
previous arrow
next arrow

ಕ್ರೀಡಾಕೂಟ: ಲಯನ್ಸ್ ವಿದ್ಯಾರ್ಥಿಗಳು ವಿಭಾಗೀಯ ಮಟ್ಟ, ರಾಜ್ಯ ಮಟ್ಟಕ್ಕೆ ಆಯ್ಕೆ

300x250 AD

ಶಿರಸಿ; ಉಪನಿರ್ದೇಶಕರ ಕಾರ್ಯಾಲಯ ಶಿರಸಿ, ಶೈಕ್ಷಣಿಕ ಜಿಲ್ಲೆ ಶಿರಸಿ (ಉ.ಕ) ಇವರ ಸಹಯೋಗದಲ್ಲಿ ಪಾರೆಸ್ಟ್ ಭವನದಲ್ಲಿ ನಡೆಸಲಾದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ ಕುಮಾರಿ. ತ್ವಿಶಾ ಹೆಗಡೆ, ಖುಷಿ ಶೆಟ್ಟಿ, ಪಾವನಿ ಗೌಡ ಯೋಗಿತಾ ಮೋದಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಕರ ವಿಭಾಗದಲ್ಲಿ ಕುಮಾರ ಅಥರ್ವ ನಾಯಕ, ಶ್ರೇಯಸ್ ಹೆಗಡೆ, ಸಾಜಿದ್ ಶುಂಠಿ, ಅಮೋಘ ಭಟ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಲ್ಲಿ ಕುಮಾರಿ. ಖುಷಿ ಶೆಟ್ಟಿ, ತ್ವಿಶಾ ಹೆಗಡೆ ಹಾಗೂ ಶ್ರೇಯಸ್ ಹೆಗಡೆ ಅಥರ್ವ ನಾಯಕ ಈ ವಿದ್ಯಾರ್ಥಿಗಳು ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದ್ದಾರೆ.
ಟೆಬಲ್ ಟೆನ್ನಿಸ್ ಬಾಲಕರ ವಿಭಾಗದಲ್ಲಿ ಹರ್ಷಿತ್ ಜೋಗಳೇಕರ್, ಶ್ರವಣ್ ಮಾದರ್, ಅಥರ್ವ ನಾಯಕ, ಸಾಜೀದ್ ಶುಂಠಿ, ಶ್ರೇಯಸ್ ಹೆಗಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರಲ್ಲಿ ಕುಮಾರ ಹರ್ಷಿತ್ ನಾಗರಾಜ ಜೋಗಳೇಕರ್ ಹಾಗೂ ಶ್ರವಣ ಕನಕಪ್ಪ ಮಾದರ್ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್‌ದ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕಿಯಾದ ಶ್ರೀಮತಿ ಚೇತನಾ ಪಾವಸ್ಕರ್ ಮಾರ್ಗದರ್ಶನ ನೀಡಿರುತ್ತಾರೆ. ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಪ್ರಶಸ್ತಿ ಪತ್ರ ಹಾಗೂ ಮೆಡಲ್ ತಮ್ಮದಾಗಿಸಿಕೊಂಡು ಶಾಲೆಯ ಕೀರ್ತಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಕ್ರೀಡಾರಂಗದಲ್ಲಿ ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ಬಾಂದವರು, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top