• Slide
    Slide
    Slide
    Slide
    previous arrow
    next arrow
  • ಕ್ರೀಡಾಕೂಟ: ಜಿಲ್ಲಾಮಟ್ಟಕ್ಕೆ ಬಿದ್ರಕಾನ ಪ್ರೌಢಶಾಲೆ ವಿದ್ಯಾರ್ಥಿಗಳು

    300x250 AD

    ಸಿದ್ದಾಪುರ:ಪಟ್ಟಣದ ಎಂ. ಜಿ. ಸಿ. ಮೈದಾನದಲ್ಲಿ ನಡೆದ ಹದಿನಾಲ್ಕು ವರ್ಷದೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಎಂ. ಜಿ. ಸಿ. ಎಂ. ಬಿದ್ರಕಾನ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಗಗನ ಕಡೇಮನಿ ಇವನು ನೂರು ಮೀಟರ್ ಓಟ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು, ವರ್ಷಾ ಕೊಡಿಯಾ ಇವಳು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಗಿದ್ದಾಳೆ. ಜೊತೆಗೆ ನೂರು ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯಾಧ್ಯಾಪಕರು, ಶಿಕ್ಷಕರು, ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top