Slide
Slide
Slide
previous arrow
next arrow

ಶ್ರೀ ಮಹಾಸತಿ ಭೈರವಿ ದೇವಾಲಯದಲ್ಲಿ ನವರಾತ್ರಿ ಉತ್ಸವ

300x250 AD

ಕುಮಟಾ: ತಾಲೂಕಿನ ಮಿರ್ಜಾನ್ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಮಹಾಸತಿ ಭೈರವಿ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜೆ,ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಪರಮ ಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ದಿವ್ಯ ಆಶೀರ್ವಾದದೊಂದಿಗೆ ಹಾಗೂ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಹಾಗೂ ಶ್ರೀ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಮತ್ತು ಉತ್ತರಕನ್ನಡ ಜಿಲ್ಲಾ ಶಾಖಾ ಮಠದ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಆಶೀರ್ವಾದಪೂರ್ಣ ಮಾರ್ಗದರ್ಶನದಲ್ಲಿ, ಮಿರ್ಜಾನ್ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಶರನ್ನವರಾತ್ರಿಯ ಚತುರ್ಥಿ ದಿನದಂದು ಕೂಷ್ಮಾಂಡದೇವಿ ಕುಂಕುಮಾಲಂಕಾರ ಮಾಡಿ ಬೆಳಿಗ್ಗೆಯಿಂದ ಲಲಿತ ಸಹಸ್ರನಾಮ, ಪಂಚಾಮೃತ ಅಭಿಷೇಕ, ಶ್ರೀ ಮಹಾಗಣಪತಿ ಭಜನಾ ಮಂಡಳಿ, ಹೆಗಡೆ ಇವರಿಂದ ಭಜನಾ ಕಾರ್ಯಕ್ರಮ, ದುರ್ಗಾ ಹವನ, ಸಂಜೆ ಮಹಾಮಂಗಳಾರತಿಯೊಂದಿಗೆ ನವರಾತ್ರೋತ್ಸವದ ನಾಲ್ಕನೇ ದಿನವು ಸಂಪನ್ನವಾಯಿತು.

300x250 AD
Share This
300x250 AD
300x250 AD
300x250 AD
Back to top