Slide
Slide
Slide
previous arrow
next arrow

ಸೇವಾ ಪಾಕ್ಷಿಕ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ

300x250 AD

ಮುಂಡಗೋಡ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಬಿಜೆಪಿ ಜಿಲ್ಲಾ ಎಸ್.ಟಿ.ಮೋರ್ಚಾ ವತಿಯಿಂದ ಪಟ್ಟಣದ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡ  ಎಸ್. ಟಿ. ಸಮುದಾಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಮಾನ್ಯ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.

ನಂತರ ಅವರು ಎಸ್.ಟಿ‌.ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

300x250 AD

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ತಳವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಬಾಳಂಬಿಡ್, ಪ.ಪಂ ಅಧ್ಯಕ್ಷರಾದ ಶ್ರೀಮತಿ ಜಯಸುಧಾ ಬೋವಿ, ಉಪಾಧ್ಯಕ್ಷ ಶ್ರೀಕಾಂತ ಸಾನು, ಪ್ರಮುಖರಾದ ಗುಡ್ಡಪ್ಪ ಕಾತೂರ, ಉಮೇಶ್ ಬಿಜಾಪುರ, ಸಿದ್ದಪ್ಪ ಹಡಪದ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top