ಕಾರವಾರ: ಯುವಜನ ವ್ಯವಹಾರಗಳ ಇಲಾಖೆ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಕಳೆದ ವರ್ಷದಂತೆ ಈ ವರ್ಷವೂ ಅ.1 ರಿಂದ 31ರವರೆಗೆ ದೇಶದಾದ್ಯಂತ ಒಂದು ತಿಂಗಳ ಅವಧಿಯ ಸ್ವಚ್ಛ ಭಾರತ 2.0 ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರ ಸಂಘಟನೆ, ಅಂಗಸಂಸ್ಥೆ ಯುವಕ್ಲಬ್‌ಗಳು ಮತ್ತು ರಾಷ್ಟೀಯ ಸೇವಾ ಯೋಜನೆಗೆ ಸಂಯೋಜಿತವಾಗಿರುವ ಸಂಸ್ಥೆಗಳ ಜಾಲದ ಮೂಲಕ ದೇಶದಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ದೇಶಾದ್ಯಂತ 1 ಕೋಟಿ ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡುವ ಗುರಿಯನ್ನು ಹೊಂದಲಾಗಿದೆ.
ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲಿ ನಾಲ್ಕು ಲಕ್ಷದ ಹತ್ತು ಸಾವಿರ ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ.ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯದ ನೆಹರು ಯುವ ಕೇಂದ್ರ ಸಂಘಟನೆ ರಾಜ್ಯ ನಿರ್ದೇಶಕರು ಪ್ರಕಟಣೆ ಮೂಲಕ ಕೋರಿದ್ದಾರೆ.